ಮಂಗಳವಾರ, ಸೆಪ್ಟೆಂಬರ್ 29, 2020
28 °C

ಸಂಘರ್ಷ ಶಮನ ಜಬ್ದಾರಿ ಭಾರತದ್ದು: ಚೀನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೂರ್ವ ಲಡಾಖ್‌ ಗಡಿಯಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ಧ ಸ್ಥಿತಿಯನ್ನು ಶಮನಗೊಳಿಸುವ ಜವಾಬ್ದಾರಿ ಭಾರತದ ಮೇಲಿದೆ ಎಂದು ಚೀನಾ ಬುಧವಾರ ಹೇಳಿದೆ.

ಗಡಿಯಲ್ಲಿ ಉದ್ಭವಿಸಿರುವ ಸಮಸ್ಯೆಗೆ ಸಂಬಂಧಿಸಿದಂತೆ ಉಭಯ ದೇಶಗಳ ವಿದೇಶಾಂಗ ಸಚಿವರಾದ ಎಸ್‌.ಜೈಶಂಕರ್‌ ಹಾಗೂ ವಾಂಗ್‌ ಯಿ ಅವರು ಮಾಸ್ಕೊದಲ್ಲಿ ಮಾತುಕತೆ ನಡೆಸಿ, ಐದಂಶಗಳ ಸೂತ್ರ ರಚಿಸಿ ವಾರದ ಬಳಿಕ ಚೀನಾದಿಂದ ಈ ಹೇಳಿಕೆ ಹೊರ ಬಿದ್ದಿದೆ.

‘ಗಡಿ ವಿಷಯದಲ್ಲಿ ಭಾರತದ ಸೇನೆ ತಾನು ಮಾಡಿರುವ ತಪ್ಪನ್ನು ತಿದ್ದುಕೊಳ್ಳಬೇಕು, ಪೀಪಲ್ಸ್‌ ಲಿಬರೇಷನ್‌ ಆರ್ಮಿ ಯೋಧರೊಂದಿಗೆ ಸಂಘರ್ಷ ನಡೆಸಿದ ಸ್ಥಳದಿಂದ ಸೇನೆಯನ್ನು ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಬೇಕು ಹಾಗೂ ಸಂಘರ್ಷವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಖಚಿತವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು‘ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್‌ ವೆನ್‌ಬಿನ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು