ಭಾನುವಾರ, ಮೇ 22, 2022
22 °C

ಬೇರೆ ಪಕ್ಷಗಳೊಂದಿಗೆ ಮೈತ್ರಿಗಾಗಿ ಮುಕ್ತ ಮನಸ್ಸು: ಪ್ರಿಯಾಂಕಾ ಗಾಂಧಿ ವಾದ್ರಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ‘ಉತ್ತರ ‍ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಇತರೆ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ತಮ್ಮ ಪಕ್ಷ ಮುಕ್ತ ಮನಸ್ಸು ಹೊಂದಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಹೇಳಿದರು.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,‘ಈ ಬಗ್ಗೆ ಇಷ್ಟು ಬೇಗ ಏನೂ ಹೇಳಲು ಸಾಧ್ಯವಿಲ್ಲ. ನಾವು ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುಲು ತೆರೆದ ಮನಸ್ಸನ್ನು ಹೊಂದಿದ್ದೇವೆ’ ಎಂದರು.

‘ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ. ನಮ್ಮಂತೆ ಬೇರೆ ಪಕ್ಷಗಳು ಮೈತ್ರಿಗಾಗಿ ಸಿದ್ಧವಿರಬೇಕು. ನಾವು ಮೈತ್ರಿಗೆ ತೆರೆದ ಮನಸ್ಸನ್ನು ಹೊಂದಿದ್ಧೇವೆ. ಆದರೆ ನನಗೆ ನಮ್ಮ ಪಕ್ಷವೇ ಮೊದಲ ಆದ್ಯತೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು