ಮಂಗಳವಾರ, ಮಾರ್ಚ್ 21, 2023
29 °C

ಸೇನೆಯು ಸದಾ ಸನ್ನದ್ಧ ಸ್ಥಿತಿಯಲ್ಲಿರಲಿ: ರಾಜನಾಥ್ ಸಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗೆ ದೀರ್ಘಕಾಲದಿಂದ ಗಡಿ ಬಿಕ್ಕಟ್ಟು ಇರುವ ಕಾರಣ ಸೇನೆಯನ್ನು ಸದಾ ಕಾರ್ಯಾಚರಣೆಗೆ ಸನ್ನದ್ಧವಾಗಿರಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಬುಧವಾರ ಸೇನೆಯ ಉನ್ನತ ಕಮಾಂಡರ್‌ಗಳಿಗೆ ಕರೆ ನೀಡಿದ್ದಾರೆ.

ಇಲ್ಲಿ ಹಮ್ಮಿಕೊಂಡಿದ್ದ ಐದು ದಿನಗಳ ದ್ವೈವಾರ್ಷಿಕ ಸಮಾವೇಶದಲ್ಲಿ ಕಮಾಂಡರ್‌ಗಳ ಜೊತೆ ಸಂವಾದ ನಡೆಸಿದ ಸಚಿವರು,‘ಭಾರತೀಯ ಸೇನೆ ಮತ್ತು ಅದರ ನಾಯಕತ್ವದಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ’ ಎಂದೂ ಹೇಳಿದ್ದಾರೆ.

ಸಮಾವೇಶದಲ್ಲಿ ದೇಶದ ಭದ್ರತೆಯ ಸವಾಲುಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು