ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಆಳ್ವಾ ನಾಮಪತ್ರ ಸಲ್ಲಿಕೆ

Last Updated 19 ಜುಲೈ 2022, 8:36 IST
ಅಕ್ಷರ ಗಾತ್ರ

ನವದೆಹಲಿ:ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳಒಮ್ಮತದ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವಾ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎನ್‌ಸಿಪಿಯ ಶರದ್‌ ಪವಾರ್‌, ಸಿಪಿಐ–ಎಂ ಪಕ್ಷದ ಸೀತಾರಾಂ ಯೆಚೂರಿ ಸೇರಿದಂತೆ ಹಲವು ನಾಯಕರು ಆಳ್ವಾ ಅವರೊಂದಿಗೆ ಉಪಸ್ಥಿತರಿದ್ದರು.

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್‌ 10 ರಂದು ಮುಕ್ತಾಯವಾಗಲಿದೆ. ಹೀಗಾಗಿ ಆ ಸ್ಥಾನದ ಚುನಾವಣೆಗೆಆಗಸ್ಟ್‌ 6 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿರುವ ಜಗದೀಪ್‌ ಧನಕರ್‌ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT