ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಕೋವಿಡ್‌ ಲಸಿಕೆ ಕಾರ್ಯಕ್ರಮಕ್ಕೆ ಆಗ್ರಹ: ಪ್ರಧಾನಿಗೆ ವಿಪಕ್ಷಗಳಿಂದ ಪತ್ರ

Last Updated 12 ಮೇ 2021, 16:35 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಪ್ರಸರಣದ ಸರಪಳಿಯನ್ನು ತುಂಡರಿಸಲು ಉಚಿತ ಸಾಮೂಹಿಕ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿ 12 ವಿರೋಧ ಪಕ್ಷಗಳ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

ಅಲ್ಲದೇ, ಸೆಂಟ್ರಲ್‌ ವಿಸ್ತಾ ಯೋಜನೆಯನ್ನು ಕೈಬಿಡಬೇಕು. ಅದಕ್ಕೆ ಮೀಸಲಿಟ್ಟಿರುವ ಹಣವನ್ನು ಕೋವಿಡ್‌–19 ವಿರುದ್ಧದ ಹೋರಾಟಕ್ಕೆ ಬಳಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಬೇಕು, ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ₹ 6,000 ನೀಡಬೇಕು ಎಂಬುದು ಸೇರಿದಂತೆ ವಿವಿಧ ಅಂಶಗಳನ್ನು ಪತ್ರದಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT