ಮಂಗಳವಾರ, ಸೆಪ್ಟೆಂಬರ್ 28, 2021
22 °C

ಪೆಗಾಸಸ್ ಮತ್ತಿತರ ವಿಷಯಗಳ ಚರ್ಚೆ: ಕಾರ್ಯತಂತ್ರ ರೂಪಿಸಲು ವಿರೋಧ ಪಕ್ಷಗಳ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಪೆಗಾಸಸ್‌ ಗೂಢಚರ್ಯೆ ಮತ್ತು ಕೃಷಿ ಕಾಯ್ದೆಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚಿಸಲು ಸಂಬಂಧ ಜಂಟಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್‌, ಡಿಎಂಕೆ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಬುಧವಾರ ಸಭೆ ನಡೆಸಿದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ 14 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಕಾಂಗ್ರೆಸ್ ಜೊತೆಗೆ ಡಿಎಂಕೆ, ಟಿಎಂಸಿ, ಎನ್‌ಸಿಪಿ, ಶಿವಸೇನಾ, ಎಸ್ಪಿ, ಸಿಪಿಎಂ, ಆರ್‌ಜೆಡಿ, ಎಎಪಿ, ಸಿಪಿಐ, ಎನ್‌ಸಿ, ಐಯುಎಂಎಲ್, ಎಲ್‌ಜೆಡಿ, ಆರ್‌ಎಸ್‌ಪಿ ಮತ್ತು ಕೆಸಿ (ಎಂ) ಪಕ್ಷದ ನಾಯಕರು ಹಾಜರಿದ್ದರು.

ಇದಕ್ಕೂ ಮುನ್ನ ಪಂಜಾಬ್‌ನ ಕಾಂಗ್ರೆಸ್‌ ಮತ್ತು ಅಕಾಲಿದಳದ ಸಂಸದರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವುದಕ್ಕಾಗಿ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು