ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಅನರ್ಹತೆ | ವಿಪಕ್ಷಗಳ ಒಗ್ಗಟ್ಟು, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

Last Updated 27 ಮಾರ್ಚ್ 2023, 7:03 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.

ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.

ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಸಂಸದರು ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ರಾಹುಲ್ ಅನರ್ಹತೆ | ವಿಪಕ್ಷಗಳ ಒಗ್ಗಟ್ಟು, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಸಂರಕ್ಷಿಸಲು ಯಾರಾದರೂ ಮುಂದೆ ಬಂದರೆ ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಸತ್ಯ ಹೊರಬೇಕೆಂದು ನಾವು ಬಯಸುತ್ತೇವೆ. ಅದಾನಿ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಾಗಲು ಕಾರಣ ಏನಿರಬಹುದು? ಅವರಲ್ಲಿ ಮಾಟ ಮಂತ್ರವಿದ್ದರೆ ಅದನ್ನು ನಾಗರಿಕರೂ ತಿಳಿಸಲು ಬಯಸುತ್ತೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯಾದ್ದಲ್ಲಿ ಆ ಮ್ಯಾಜಿಕ್ ಬಗ್ಗೆ ನಮಗೆ ಮತ್ತು ಜನರಿಗೆ ತಿಳಿಯುತ್ತದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT