ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಪಕ್ಷ ನಾಯಕರ ಆರೋಪ

ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ನಾಯಕರೊಬ್ಬರನ್ನು ಜನನಿಬಿಡ ರಸ್ತೆಯಲ್ಲೇ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷಗಳು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಮಸ್ಯೆಯನ್ನು ಸರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ತಮಿಳುನಾಡಿದ ಪ್ರಮುಖ ವಿಪಕ್ಷ ಎಐಎಡಿಎಂಕೆ ಮತ್ತು ಬಿಜೆಪಿ ಆರೋಪಿಸಿವೆ.

ಮಂಗಳವಾರ ಸಂಜೆ ಅಣ್ಣಾ ಸಾಲೈಯ ಪ್ರಮುಖ ಪ್ರದೇಶದಲ್ಲಿ ಬಿಜೆಪಿ ಎಸ್‌ಸಿ ಮತ್ತು ಎಸ್‌ಟಿ ಘಟಕದ ನಾಯಕ ಬಾಲಚಂದರ್ ಅವರನ್ನು ಅಪರಿಚಿತರ ತಂಡ ಹತ್ಯೆ ಮಾಡಿತ್ತು.

ಈ ಹಿಂದಿನ ವರ್ಷಗಳಲ್ಲಿ ತಮಿಳುನಾಡಿನ ಪ್ರಮುಖ ನಗರಗಳಲ್ಲಿ 20 ಕೊಲೆ ಪ್ರಕರಣ ವರದಿಯಾಗಿದ್ದು, ಅದರಲ್ಲಿ ಆರು ಕೊಲೆ ಪ್ರಕರಣಗಳು ಜನನಿಬಿಡ ರಸ್ತೆಯಲ್ಲೇ ನಡೆದಿದೆ. ತಮಿಳುನಾಡು ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಪಕ್ಷಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT