ಶನಿವಾರ, ಮಾರ್ಚ್ 25, 2023
28 °C

ಚೀನಾ ಅತಿಕ್ರಮಣದ ಕುರಿತ ಚರ್ಚೆಗೆ ಸಿಗದ ಅವಕಾಶ: ರಾಜ್ಯಸಭೆ ಕಲಾಪ ಬಹಿಷ್ಕಾರ

ಏಜನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ-ಚೀನಾ ಗಡಿ ಘರ್ಷಣೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸೋಮವಾರ ಸದನದಿಂದ ಹೊರ ನಡೆದು ಪ್ರತಿಭಟಿಸಿವೆ.

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದಿಂದ ಆಗಿರುವ ಅತಿಕ್ರಮಣದ ವಿಷಯವನ್ನು ಚರ್ಚೆ ಮಾಡಬೇಕು ಎಂದು ಸದಸ್ಯರು ನಿಲುವಳಿ ಸೂಚನೆ ಮಂಡಿಸಿದರು. ಆದರೆ, ವಿಚಾರದ ಚರ್ಚೆಗೆ ರಾಜ್ಯಸಭೆಯಲ್ಲಿ ಅವಕಾಶ ನಿರಾಕರಿಸಲಾಯಿತು.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಅವರು (ಚೀನಾ) ನಮ್ಮ ಭೂಮಿಯನ್ನು ಅತಿಕ್ರಮಿಸುತ್ತಿದ್ದಾರೆ. ನಾವು ಈ ವಿಷಯವನ್ನು ಚರ್ಚಿಸದಿದ್ದರೆ ಇನ್ನೇನು ಚರ್ಚಿಸಬೇಕು? ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ನಾವು ಸಿದ್ಧರಿದ್ದೇವೆ’ ಎಂದು ಹೇಳಿದರು.

ಆದರೆ, ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಕಲಾಪ ಬಹಿಷ್ಕರಿಸಿ ಸದನದಿಂದ ಹೊರ ನಡೆದು ಪ್ರತಿಭಟನೆ ನಡೆಸಿದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು