ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ಕೊರತೆಯಿಂದ ಸಾವು: ವಿಪಕ್ಷಗಳು ರಾಜಕೀಯ ಮಾಡುತ್ತಿವೆ – ಬಿಜೆಪಿ

Last Updated 21 ಜುಲೈ 2021, 10:37 IST
ಅಕ್ಷರ ಗಾತ್ರ

ನವದೆಹಲಿ: ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂದು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ತಿಳಿಸಿದ್ದವು. ಆದರೆ ಈಗ ರಾಜಕೀಯ ಮಾಡುತ್ತಿವೆ ಎಂದು ಬಿಜೆಪಿ ದೂರಿದೆ.

ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಂಗಳವಾರ ತಿಳಿಸಿತ್ತು. ಇದನ್ನು ಪ್ರತಿಪಕ್ಷಗಳ ನಾಯಕರು ಟೀಕಿಸಿದ್ದಾರೆ.

ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂದು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ನ್ಯಾಯಾಲಯಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದವು. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನೀಡಿದ್ದ ಅಂಕಿಅಂಶ ಆಧರಿಸಿಯೇ ಕೇಂದ್ರ ಸರ್ಕಾರ ವರದಿ ನೀಡಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ.

ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಬಗ್ಗೆ ಯಾವುದೇ ರಾಜ್ಯ ಮಾಹಿತಿ ನೀಡಿಲ್ಲ ಎಂದೂ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪ್ರತಿಪಕ್ಷಗಳ ಇತರ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಏಪ್ರಿಲ್–ಮೇ ತಿಂಗಳಲ್ಲಿ ಕೆಲವು ರಾಜ್ಯಗಳಲ್ಲಿ ಆಮ್ಲಜನಕ ಕೊರತೆಯಿಂದ ಕೋವಿಡ್ ಸೋಂಕಿತರು ಮೃತಪಟ್ಟ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT