ಭಾನುವಾರ, ಜುಲೈ 3, 2022
27 °C

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಿರೋಧ ಪಕ್ಷಗಳ ಸದಸ್ಯರ ಸಭಾತ್ಯಾಗ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದರು.

ಪ್ರಶ್ನೋತ್ತರ ಕಲಾಪದ ಬಳಿಕ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಚುನಾವಣೆ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಕುರಿತು ಮೊದಲೇ ವಿರೋಧ ಪಕ್ಷ ಹೇಳಿತ್ತು ಎಂದರು.

ಕಾಂಗ್ರೆಸ್, ಟಿಎಂಸಿ, ಎನ್‌ಸಿಪಿ, ಡಿಎಂಕೆ ಮತ್ತು ಎಡ ಪಕ್ಷಗಳ ಸದಸ್ಯರು ತಮ್ಮ ಸೀಟುಗಳಿಂದಲೇ ಇಂಧನ ಬೆಲೆ ಏರಿಕೆ ವಿರುದ್ಧ ಘೋಷಣೆ ಕೂಗಿದರು ಮತ್ತು ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಆರಂಭದ ವೇಳೆಯಲ್ಲೇ ವಿರೋಧ ಪಕ್ಷಗಳ ಸದಸ್ಯರು ಬೆಲೆ ಏರಿಕೆಯನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರೂ ಕೂಡ ಸ್ಪೀಕರ್ ಓಂ ಬಿರ್ಲಾ ಅನುಮತಿ ನೀಡಲಿಲ್ಲ.

ಇದನ್ನೂ ಓದಿ: 

ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ವಿಷಯ ಪ್ರಸ್ತಾಪಿಸುವಂತೆ ವಿರೋಧ ಪಕ್ಷಗಳ ಸದಸ್ಯರಿಗೆ ತಿಳಿಸಿದರು.

ಸುಮಾರು ನಾಲ್ಕೂವರೆ ತಿಂಗಳ ನಂತರ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಮಂಗಳವಾರ ಏರಿಕೆಯಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ 80 ಪೈಸೆಯಷ್ಟು ಹೆಚ್ಚಳವಾಗಿದೆ. ಇದೇ ವೇಳೆ ಗೃಹ ಬಳಕೆಯ ಅಡುಗೆ ಅನಿಲ ದರವೂ ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಳವಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು