ನವದೆಹಲಿ: ಉದ್ಯೋಗಿಯೊಬ್ಬರು ಸಲ್ಲಿಸಿದ ಸೇವೆಗೆ ಸಂಬಂಧಿಸಿದ ದಾಖಲೆಗಳ ಆಧಾರದಲ್ಲಿಯೇ ಅವರ ಅಕಾಲಿಕ ನಿವೃತ್ತಿ ಕುರಿತ ಆದೇಶ ಹೊರಡಿಸಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ವಿ.ರಾಮಸುಬ್ರಮಣಿಯನ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
ಕಾನ್‌ಸ್ಟೆಬಲ್‌ವೊಬ್ಬರಿಗೆ ಸಿಐಎಸ್‌ಎಫ್ ಅಕಾಲಿಕ ನಿವೃತ್ತಿ ನೀಡಿದ್ದನ್ನು ರದ್ದುಪಡಿಸಿ ದೆಹಲಿ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಐಎಸ್‌ಎಫ್ ಮೇಲ್ಮನವಿ ಸಲ್ಲಿಸಿತ್ತು.
ದೆಹಲಿ ಹೈಕೋರ್ಟ್‌ನ ಆದೇಶವನ್ನು ರದ್ದು ಮಾಡಿದ ನ್ಯಾಯಪೀಠ, ‘ಉದ್ಯೋಗಿಯ ಸೇವಾ ದಾಖಲೆಗಳನ್ನು ಆಧರಿಸಿ ಕಡ್ಡಾಯ ನಿವೃತ್ತಿ ನೀಡುವ ಅಧಿಕಾರದ ವಿಷಯದಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡಬಾರದು’ ಎಂದು ಅಭಿಪ್ರಾಯಪಟ್ಟಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.