ಶನಿವಾರ, ಆಗಸ್ಟ್ 13, 2022
26 °C

ಜಾಮೀನಿನ ಮೇಲೆ ಹೊರಬಂದು ಮತ್ತದೇ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ!

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ಅತ್ಯಾಚಾರ ಸಂತ್ರಸ್ತೆಯೊಬ್ಬರು ಅದೇ ಆರೋಪಿಯಿಂದ ಮತ್ತೊಮ್ಮೆ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.

ಸೋಮವಾರ ರಾತ್ರಿ ಘಟನೆ ನಡೆದಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

'ಜೈಪುರದ ಬಾಗ್ರು ಎಂಬಲ್ಲಿರುವ ತನ್ನ ಮನೆಗೆ ಯುವತಿಯನ್ನು ಹೊತ್ತೊಯ್ದ ಆರೋಪಿ ಅಲ್ಲಿ ಆಕೆ ಮೇಲೆ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಪೋಷಕರು ದೂರು ನೀಡಿದ್ದಾರೆ. ಯುವತಿಯನ್ನು ರಕ್ಷಿಸಲಾಗಿದೆ’ ಎಂದು ಕಾರ್ಧನಿ ಪೊಲೀಸ್‌ ಠಾಣೆ ಅಧಿಕಾರಿ ರಾಜೇಶ್ ಬಾಪ್ನಾ ಹೇಳಿದ್ದಾರೆ. ಪ್ರಕರಣ ದಾಖಲಾಗಿರುವುದಾಗಿಯೂ ಅವರು ತಿಳಿಸಿದ್ದಾರೆ.

ಈ ಮೊದಲು ಇದೇ ಆರೋಪಿಯ ವಿರುದ್ಧ ಇದೇ ಯುವತಿ ಅಪಹರಣ ಮತ್ತು ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಈ ಮೊದಲಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್‌ಶೀಟ್‌ ಅನ್ನೂ ಸಲ್ಲಿಸಿದ್ದರು. ಆರೋಪಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು