ಸೋಮವಾರ, ಆಗಸ್ಟ್ 15, 2022
20 °C
ಸಂಸ್ಥೆಯ ಎಲ್ಲ ವಿಭಾಗಗಳು, ಪ್ರಯೋಗಾಲಯಗಳಿಗೆ ಬಾಗಿಲು* ಆನ್‌ಲೈನ್‌ ಮೂಲಕ ತರಗತಿ

ಐಐಟಿ ಮದ್ರಾಸ್‌: 104 ವಿದ್ಯಾರ್ಥಿಗಳಿಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ–ಮದ್ರಾಸ್‌ನ (ಐಐಟಿಎಂ) 104 ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಸಂಸ್ಥೆಯ ಎಲ್ಲ ವಿಭಾಗಗಳು ಹಾಗೂ ಪ್ರಯೋಗಾಲಯಗಳನ್ನು ಮುಚ್ಚಲಾಗಿದೆ.

‘ಸೋಂಕಿತ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ’ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್‌ ಹೇಳಿದ್ದಾರೆ.

ಐಐಟಿಎಂನಲ್ಲಿ ಡಿಸೆಂಬರ್‌ 1ರಿಂದ 12ರ ವರೆಗೂ 444 ಮಾದರಿಗಳನ್ನು ಕೋವಿಡ್‌–19 ಪರೀಕ್ಷೆಗೆ ಒಳಪಡಿಸಲಾಗಿದ್ದು, 104 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಸೋಮವಾರ ಒಂದೇ ದಿನ 33 ಜನರಿಗೆ ಕೋವಿಡ್‌ ಇರುವುದು ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಸಂಸ್ಥೆಯ ಎಲ್ಲ ವಿಭಾಗಗಳು ಹಾಗೂ ಪ್ರಯೋಗಾಲಯಗಳನ್ನು ಮುಚ್ಚಲಾಗಿದೆ. ಪ್ರಸ್ತುತ ಸುಮಾರು 700 ವಿದ್ಯಾರ್ಥಿಗಳು ಒಂಬತ್ತು ಹಾಸ್ಟೆಲ್‌ಗಳಲ್ಲಿ ಉಳಿದಿದ್ದು,  ಬಹುತೇಕರು ಸಂಶೋಧನಾ ವಿದ್ಯಾರ್ಥಿಗಳಾಗಿದ್ದಾರೆ. ತರಗತಿಗಳನ್ನು ಆನ್‌ಲೈನ್‌ ಮುಖಾಂತರ ನಡೆಸಲಾಗುತ್ತಿದೆ’ ಎಂದು ಐಐಟಿಎಂನ ವಕ್ತಾರರು ಹೇಳಿದ್ದಾರೆ.

ಕೋವಿಡ್‌–19 ದೃಢಪಟ್ಟವರಲ್ಲಿ ಬಹುತೇಕರು ವಿದ್ಯಾರ್ಥಿಗಳು ಹಾಗೂ ಕೆಲವು ಮಂದಿ ಕ್ಯಾಂಟೀನ್‌ ಕೆಲಸಗಾರರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು