ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದಿನ ಕೋಲ್ಕತ್ತಾದ 100ಕ್ಕೂ ಹೆಚ್ಚು ವೈದ್ಯರಿಗೆ ಕೋವಿಡ್-19 ದೃಢ

Last Updated 3 ಜನವರಿ 2022, 10:33 IST
ಅಕ್ಷರ ಗಾತ್ರ

ಕೋಲ್ಕತ್ತಾ:24 ಗಂಟೆಗಳ ಅವಧಿಯಲ್ಲಿ ಕೋಲ್ಕತ್ತಾದ ಮೂರು ವಿವಿಧ ಆಸ್ಪತ್ರೆಗಳ 100ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ದೃಢಪಟ್ಟಿದೆ ಎಂದು ಹಿರಿಯ ಆರೋಗ್ಯ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.

ಕೋಲ್ಕತ್ತ ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಕನಿಷ್ಠ 70 ವೈದ್ಯರು, ಚಿತ್ತರಂಜನ್ ಸೇವಾ ಸದನ ಮತ್ತುಕಾಳಿಘಾಟ್‌ನ ಶಿಶು ಸದನ ಆಸ್ಪತ್ರೆಯಲ್ಲಿತರಬೇತಿನಿರತ 24 ವೈದ್ಯರು ಹಾಗೂಪ್ರಾದೇಶಿಕ ನೇತ್ರ ಚಿಕಿತ್ಸಾ ಸಂಸ್ಥೆಯ 12 ಮಂದಿ ವೈದ್ಯರಿಗೆ ಸೋಂಕು ತಗುಲಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈ ಎಲ್ಲ ವೈದ್ಯರನ್ನೂ ಸಾಂಸ್ಥಿಕ ಕ್ವಾರಂಟೈನ್‌ಗೆ ರವಾನಿಸಲಾಗಿದೆ. ಸಂಪರ್ಕಿತರ ಪತ್ತೆಗೆ ಮುಂದಾಗಿದ್ದು, ಮೂರು ಆಸ್ಪತ್ರೆಗಳಲ್ಲೂ ಪ್ರತಿಯೊಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭಾನುವಾರ ಹೊಸದಾಗಿ 6,153 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ16,49,150 ಏರಿಕೆಯಾಗಿದೆ. ಸದ್ಯ17,038 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT