ಶನಿವಾರ, ಮೇ 15, 2021
24 °C

ಕುಂಭ ಮೇಳ: ಒಂದು ಸಾವಿರಕ್ಕೂ ಹೆಚ್ಚು ಕೋವಿಡ್‌ ಪಾಸಿಟಿವ್‌ ಪ್ರಕರಣ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಪಾಸಿಟಿವ್‌ ಬಂದಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.

ಲಕ್ಷಾಂತರ ಜನರು ಮಾಸ್ಕ್‌ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.

ಕಳೆದ 48 ಗಂಟೆಗಳಲ್ಲಿ ನದಿ ಪಕ್ಕದಲ್ಲಿರುವ ಹರಿದ್ವಾರ ನಗರದಲ್ಲಿ 1 ಸಾವಿರಕ್ಕೂ ಅಧಿಕ ಜನರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಬೃಹತ್‌ ಧಾರ್ಮಿಕ ಸಮಾರಂಭ, ಚುನಾವಣಾ ರ‍್ಯಾಲಿಗಳನ್ನು ನಡೆಸದಂತೆ ಹಾಗೂ ಹೆಚ್ಚು ಜನಸಂದಣಿ ಸೇರಬಾರದು ಎಂದು ತಜ್ಞರು ಈಗಾಗಲೇ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ... Covid-19 Karnataka Update: ರಾಜ್ಯದಲ್ಲಿಂದು 11,265 ಹೊಸ ಪ್ರಕರಣ, 38 ಸಾವು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು