ಭಾನುವಾರ, ಆಗಸ್ಟ್ 7, 2022
21 °C

ದೆಹಲಿ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ‌ದ 1,200ಕ್ಕೂ ಹೆಚ್ಚು ಜನರಿಗೆ ದಂಡ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಗರದಲ್ಲಿ 1,200ಕ್ಕೂ ಹೆಚ್ಚು ಜನರಿಗೆ ದಂಡ ವಿಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಾಸ್ಕ್‌ ಧರಿಸದ 1,068, ಅಂತರ ಕಾಪಾಡಿಕೊಳ್ಳದ 192 ಜನರಿಗೆ ದಂಡ ವಿಧಿಸಲಾಗಿದೆ ಎಂದು ದೆಹಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಅನಿಲ್‌ ಮಿತ್ತಲ್‌ ಅವರು ತಿಳಿಸಿದ್ದಾರೆ.

ಏಪ್ರಿಲ್‌ 19ರಿಂದ ಜೂನ್‌ 11ರವರೆಗೆ 1,29,590 ಚಲನ್‌ಗಳನ್ನು ಪೊಲೀಸರು ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮಾಸ್ಕ್‌ ಧರಿಸದವರಿಗೆ 1,09,075 ಚಲನ್‌ಗಳನ್ನು ನೀಡಲಾಗಿದೆ, ಅಂತರ ಕಾಪಾಡಿಕೊಳ್ಳದ 18,790, ಸಾರ್ವಜನಿಕ ಸಭೆ ನಡೆಸಿದ 1,532, ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡಿದ 121 ಮಂದಿಗೆ ಇದುವರೆಗೆ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳೆದ ವಾರ ಏಪ್ರಿಲ್ 19ರಂದು ವಿಧಿಸಲಾಗಿದ್ದ ಲಾಕ್‌ಡೌನ್‌ನಲ್ಲಿ ವಿವಿಧ ಸಡಿಲಿಕೆಗಳನ್ನು ಘೋಷಿಸಿದ್ದಾರೆ. ಮದ್ಯ ಮಾರಾಟ ಸೇರಿದಂತೆ ಎಲ್ಲ ಬಗೆಯ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಚಿತ್ರಮಂದಿರ, ರೆಸ್ಟೋರೆಂಟ್‌, ಬಾರ್‌, ಜಿಮ್‌, ಸ್ಪಾಗಳಿಗೆ ಅನುಮತಿ ನೀಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು