ಶನಿವಾರ, ಜುಲೈ 31, 2021
27 °C
ಕೇಂದ್ರ ಆರೋಗ್ಯ ಸಚಿವಾಲಯ

ರಾಜ್ಯಗಳಲ್ಲಿ 1.53 ಕೋಟಿ ಡೋಸ್‌ ಕೋವಿಡ್‌ ಲಸಿಕೆ ಲಭ್ಯ: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ರಾಜ್ಯ, ಕೇಂದ್ರಾಡಳಿತ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1.54 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳು ಬಳಕೆಗೆ ಲಭ್ಯ ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಎಲ್ಲಾ  ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 38.56 ಕೋಟಿ ಡೋಸ್‌ಗಳಷ್ಟು ಲಸಿಕೆಗಳನ್ನು ಪೂರೈಸಲಾಗಿದೆ. ಇನ್ನೂ 63,84,230 ಡೋಸ್‌ಗಳಷ್ಟು ಲಸಿಕೆಗಳು ಸಾಗಣೆ ಹಂತದಲ್ಲಿವೆ ಎಂದು ಸಚಿವಾಲಯ ತಿಳಿಸಿದೆ.

ವ್ಯರ್ಥವಾಗಿರುವ ಲಸಿಕೆಗಳೂ ಸೇರಿದಂತೆ ಒಟ್ಟು 37.31 ಕೋಟಿ ಡೋಸ್‌ ಲಸಿಕೆಗಳ ಬಳಕೆಯಾಗಿದೆ ಎಂದು ತಿಳಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು