ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.64 ಕೋಟಿ ಕೋವಿಡ್-19 ಲಸಿಕೆಗಳು ಇನ್ನೂ ರಾಜ್ಯಗಳಲ್ಲಿ ಲಭ್ಯ: ಕೇಂದ್ರ ಸರ್ಕಾರ

Last Updated 2 ಜೂನ್ 2021, 11:35 IST
ಅಕ್ಷರ ಗಾತ್ರ

ನವದೆಹಲಿ: 1.64 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಪ್ರಮಾಣಗಳು ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕೇಂದ್ರವು ಇಲ್ಲಿಯವರೆಗೆ ಉಚಿತ ಮತ್ತು ನೇರ ರಾಜ್ಯ ಖರೀದಿ ವಿಭಾಗಗಳ ಮೂಲಕ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 23 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣವನ್ನು ಒದಗಿಸಿದೆ. ಇದರಲ್ಲಿ ವ್ಯರ್ಥವಾದದ್ದು ಸೇರಿದಂತೆ ಒಟ್ಟು ಬಳಕೆಯಾಗಿರುವುದು 21,71,44,022 ಪ್ರಮಾಣವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು 1,64,42,938 ಕೋವಿಡ್-19 ಲಸಿಕೆ ಪ್ರಮಾಣಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿವೆ ಎಂದು ಅದು ಹೇಳಿದೆ.

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ, ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT