ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.70 ಕೋಟಿ ಡೋಸ್‌ ಲಸಿಕೆ ಲಭ್ಯ

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ
Last Updated 9 ಜುಲೈ 2021, 8:32 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.70 ಕೋಟಿಗೂ ಅಧಿಕ ಡೋಸ್‌ ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 38.18 ಕೋಟಿ ಡೋಸ್‌ಗಳಷ್ಟು ಲಸಿಕೆಗಳನ್ನು ಪೂರೈಸಲಾಗಿದೆ. ಇನ್ನೂ 23,80,080 ಡೋಸ್‌ಗಳಷ್ಟು ಲಸಿಕೆಗಳು ರವಾನೆಯಾಗುವ ಹಂತದಲ್ಲಿವೆ.

ಇಲ್ಲಿಯವರೆಗೆ ಒಟ್ಟು 36,48,77,756 ಡೋಸ್‌ಗಳಷ್ಟು ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಇದರಲ್ಲಿ ವ್ಯರ್ಥವಾಗಿರುವ ಲಸಿಕೆಯೂ ಸೇರಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT