ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಗಳಲ್ಲಿ 18.53 ಕೋಟಿ ಡೋಸ್‌ ಲಸಿಕೆ ಲಭ್ಯ –ಕೇಂದ್ರ

Last Updated 13 ನವೆಂಬರ್ 2021, 9:26 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೂ ಉಚಿತವಾಗಿ 123 ಕೋಟಿ ಡೋಸ್‌ ಕೋವಿಡ್‌–19 ಲಸಿಕೆ ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18.53 ಕೋಟಿ ಡೋಸ್‌ಗಳಷ್ಟು ಲಸಿಕೆ ಬಾಕಿ ಉಳಿದಿದೆ ಎಂದು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

ಲಸಿಕೆ ಅಭಿಯಾನ ಚುರುಕುಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಲಸಿಕೆ ಲಭ್ಯತೆ ಇರುವಂತೆಯೇ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಲಸಿಕೆಯ ಸಮರ್ಪಕ ಬಳಕೆಗೆರಾಜ್ಯಗಳು ವ್ಯವಸ್ಥಿತವಾಗಿ ಯೋಜನೆ ರೂಪಿಸಬೇಕು ಎಂದು ಸಚಿವಾಲಯವು ಸಲಹೆ ಮಾಡಿದೆ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ವಿತರಿಸುತ್ತಿದೆ. ಲಸಿಕೆ ಉತ್ಪಾದನಾ ಸಂಸ್ಥೆಗಳು ಉತ್ಪಾದಿಸುವ ಲಸಿಕೆಗಳಲ್ಲಿ ಶೇ 75ರಷ್ಟು ಲಸಿಕೆಗಳು ರಾಜ್ಯಗಳಿಗೆ ಪೂರೈಕೆಯಾಗುತ್ತಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT