ಕಳೆದ ವರ್ಷಕ್ಕಿಂತ 2.5 ಲಕ್ಷ ಹೆಚ್ಚುವರಿ ಅಭ್ಯರ್ಥಿಗಳಿಂದ ನೋಂದಣಿ
ನೀಟ್ ಪರೀಕ್ಷೆಗೆ 18 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ

ನವದೆಹಲಿ: 2022ನೇ ಸಾಲಿನಲ್ಲಿ ಸ್ನಾತಕೋತ್ತರ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ (ನೀಟ್) 18.72 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದಾರೆ.
ನೋಂದಾಯಿತ ಅಭ್ಯರ್ಥಿಗಳ ಪೈಕಿ ಸುಮಾರು 10.64 ಲಕ್ಷ ಮಹಿಳೆಯರು ಮತ್ತು 8.07 ಲಕ್ಷ ಮಂದಿ ಪುರುಷರು, 771 ವಿದೇಶಿಯರು ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚುವರಿ 2.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ.
ಪರೀಕ್ಷೆಯು ದೇಶದಾದ್ಯಂತ 13 ಭಾಷೆಗಳಲ್ಲಿ ಜುಲೈ 17ರಂದು ನಿಗದಿಯಾಗಿದೆ. ಕಳೆದ ವರ್ಷ ನೋಂದಾಯಿತರಾಗಿದ್ದ ಶೇ 95ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.