ರಾಜ್ಯಗಳಲ್ಲಿ ಇನ್ನೂ 1.93 ಕೋಟಿ ಡೋಸ್ ಲಸಿಕೆ ಲಭ್ಯ: ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನು 1.93 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್ಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಕೇಂದ್ರವು ಇಲ್ಲಿಯವರೆಗೆ ಉಚಿತ ಮತ್ತು ನೇರ ರಾಜ್ಯ ಖರೀದಿ ವಿಭಾಗಗಳ ಮೂಲಕ 24 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಿದೆ.
ಇದರಲ್ಲಿ ವ್ಯರ್ಥ ಸೇರಿದಂತೆ ಒಟ್ಟು 22,27,33,963 ಡೋಸ್ಗಳನ್ನು ಬಳಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1,93,95,287 ಡೋಸ್ ಲಭ್ಯವಿದೆ' ಎಂದು ಅದು ಹೇಳಿದೆ.
ದೇಶದಾದ್ಯಂತ ಲಸಿಕಾ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.