ನವದೆಹಲಿ: ಆಗ್ನೇಯ ದೆಹಲಿಯ ಓಖ್ಲಾದ ಹರಿಕೇಶ್ ನಗರದ ಮೆಟ್ರೊ ನಿಲ್ದಾಣದ ಬಳಿ ಭಾನುವಾರ ಮುಂಜಾನೆ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಕತ್ರಾನ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಕಾರ್ಖಾನೆ ಅಕ್ಕಪಕ್ಕದಲ್ಲಿದ್ದ ಗುಡಿಸಲುಗಳಿಗೆ ಬೆಂಕಿ ಆವರಿಸಿದೆ. ಪರಿಣಾಮ 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಹೋಗಿವೆ.

ಮುಂಜಾನೆ 2.20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಒಟ್ಟು 26 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.