ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಜೌರಿ: 2 ಸಾವಿರಕ್ಕೂ ಅಧಿಕ ಸಿಆರ್‌ಪಿಎಫ್‌ ಯೋಧರ ನಿಯೋಜನೆ

Last Updated 4 ಜನವರಿ 2023, 22:06 IST
ಅಕ್ಷರ ಗಾತ್ರ

ಜಮ್ಮು: ಗಡಿ ಜಿಲ್ಲೆಗಳಾದ ರಜೌರಿ ಹಾಗೂ ಪೂಂಚ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿಯನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

2,000ಕ್ಕೂ ಅಧಿಕ ಸಿಬ್ಬಂದಿಯನ್ನು ಒಳಗೊಂಡ ಸಿಆರ್‌ಪಿಎಫ್‌ನ 20 ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಉಗ್ರರ ದಾಳಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ 6 ಜನರು ಮೃತಪಟ್ಟು, ಇತರ 11 ಮಂದಿ ಗಾಯಗೊಂಡಿದ್ದರು. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದರು. ಈ ಘಟನೆ ಬೆನ್ನಲ್ಲೇ, ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT