ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಪ್ರತಿ ನಾಲ್ಕು ಮಾದರಿ ಪರೀಕ್ಷೆಗಳ ಪೈಕಿ ಒಂದು ಪಾಸಿಟಿವ್ ಫಲಿತಾಂಶ ನೀಡುತ್ತಿದೆ.

ಶನಿವಾರ ಒಂದೇ ದಿನ ಇಲ್ಲಿ 24 ಸಾವಿರ ಪ್ರಕರಣಗಳು ದಾಖಲಾಗಿದ್ದವು. ನಡೆಸಲಾದ ಮಾದರಿ ಪರೀಕ್ಷೆಗಳ ಸಂಖ್ಯೆ 99,230 ಆಗಿತ್ತು. ಇದರಿಂದಾಗಿ ದೆಹಲಿ ಸರ್ಕಾರ ಭಾರಿ ಆತಂಕದಲ್ಲಿದ್ದು, ಇದೊಂದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದು ಮುಖ್ಯಮಂತ್ರಿ ಅರವಿಂಧ ಕೇಜ್ರಿವಾಲ್ ಹೇಳಿದ್ದಾರೆ.

ಶುಕ್ರವಾರ 19,500 ಮಂದಿಗೆ ಕೋವಿಡ್ ದೃಢಪಟ್ಟಿತ್ತು. ಒಂದೇ ದಿನದಲ್ಲಿ ಮತ್ತೆ ಸುಮಾರು 5 ಸಾವಿರದಷ್ಟು ಹೊಸ ಪ್ರಕರಣಗಳು ದಾಖಲಾಗಿರುವುದರಿಂದ ಇಲ್ಲಿ ಆಮ್ಲಜನಕ, ರೆಮ್‌ಡೆಸಿವಿರ್ ಮತ್ತು ತೊಸಿಲಿಞುಮಾಬ್ ಔಷಧಗಳ ಕೊರತೆ ತೀವ್ರವಾಗಿ ಕಾಡತೊಡಗಿದೆ. ಆಸ್ಪತ್ರೆಗಳೂ ಭರ್ತಿಯಾಗತೊಡಗಿದ್ದು, ಹಾಸಿಗೆಗಳಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಲಾಗುತ್ತಿದೆ.

‘ಕೋವಿಡ್ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾದರೆ ಜನರ ಜೀವ ಉಳಿಸುವುದು ಸರ್ಕಾರದ ಪ್ರಮುಖ ಆದ್ಯತೆ ಆಗಿರಲಿದೆ. ಹೀಗಾಗಿ ಕೈಗೊಳ್ಳುವ ಯಾವುದೇ ಕಠಿಣ ಕ್ರಮಕ್ಕೆ ಜನರು ಸಿದ್ಧರಾಗಿರಬೇಕು’ ಎಂಬ ಸೂಚನೆಯನ್ನು ಕೇಜ್ರಿವಾಲ್ ನೀಡಿದ್ದಾರೆ.

ಇದನ್ನೂ ಓದಿ... Covid-19 India Update: 2.61 ಲಕ್ಷ ಹೊಸ ಪ್ರಕರಣ, 1,501 ಮಂದಿ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.