ನವದೆಹಲಿ:ವಾರದ ಹಿಂದೆ ಪ್ರಾರಂಭವಾದ ಭಾರತದ ಕೋವಿಡ್-19 ಲಸಿಕೆ ಅಭಿಯಾನವು ಈಗಾಗಲೇ ಸುಮಾರು 14 ಲಕ್ಷ ಜನಹಾಕಿಸಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕೋವಿಡ್-19 ಲಸಿಕೆ ಅಭಿಯಾನವು ಶುಕ್ರವಾರದ ವೇಳೆಗೆ ದಿನಕ್ಕೆ ಸರಾಸರಿ 3 ಲಕ್ಷ ಜನರಿಗೆ ನೀಡುವ ಮೂಲಕ ಲಸಿಕೆ ವಿತರಣೆಗೆ ಮತ್ತಷ್ಟು ವೇಗ ದೊರೆತಿದೆ.

ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ ವ್ಯಾಕ್ಸಿನೇಷನ್‌ಗಳ ಸಂಖ್ಯೆ 1,98,656 ಆಗಿದ್ದು, ಒಟ್ಟಾರೆ 13,90,592 ಮಂದಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ ಈ ಸಂಖ್ಯೆ 3,47,058ಕ್ಕೆ ತಲುಪಿದೆ.

ಜನವರಿ 16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಬಳಸಿಕೊಂಡು ಭಾರತದ ಬೃಹತ್ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾ ಜೆನೆಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿರುವ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ತಯಾರಿಸಲಾಗುತ್ತಿದೆ.

ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆಲಸಿಕೆ ಅಭಿವೃದ್ಧಿಡಿಸಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಲಸಿಕೆಯನ್ನು ಉತ್ಪಾದಿಸುತ್ತಿದೆ.

ಜುಲೈ ವೇಳೆಗೆ ಪೂರ್ಣಗೊಳ್ಳಲಿರುವ ಅಭಿಯಾನದ ಮೊದಲನೇ ಹಂತದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2 ಕೋಟಿ ಮುಂಚೂಣಿ ಕಾರ್ಮಿಕರು ಲಸಿಕೆ ಪಡೆಯಲಿದ್ದಾರೆ. ಮುಂದಿನ ಹಂತದಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರನ್ನು ಒಳಗೊಂಡಂತೆ ಪ್ರಧಾನಿ ಮೋದಿ ಮತ್ತು ಎಲ್ಲಾ ಕೇಂದ್ರ ಹಾಗೂ ರಾಜ್ಯ ಸಚಿವರು ಮತ್ತು ಶಾಸಕರು ಲಸಿಕೆ ಪಡೆಯುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.