ನವದೆಹಲಿ: ಭಾವಚಿತ್ರವುಳ್ಳ ಗುರುತುಚೀಟಿ ದಾಖಲೆಯು ಇಲ್ಲದಿದ್ದ 3.83 ಲಕ್ಷಕ್ಕೂ ಅಧಿಕ ಜನರಿಗೆ ಕೋ–ವಿನ್ ಮೂಲಕ ಜುಲೈ 26ರವರೆಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.
ಭಾರತದಲ್ಲಿ ಲಸಿಕೆ ಪಡೆದಿರುವ ಎಲ್ಲ ಫಲಾನುಭವಿಗಳು ಕೋ–ವಿನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಲೋಕಸಭೆಯಲ್ಲಿ ಶುಕ್ರವಾರ ನೀಡಿದ ಲಿಖಿತ ಉತ್ತರದಲ್ಲಿ ಅವರು ಹೇಳಿದ್ದಾರೆ.
ಫೋಟೊ ಗುರುತಿನ ಚೀಟಿ ಇಲ್ಲದವರಿಗೆ ಲಸಿಕೆ ನೀಡಲು ಸರ್ಕಾರ ಮಾರ್ಗಸೂಚಿ ಹೊರಡಿಸಿತ್ತು. ಡಿಜಿಟಲ್ ತಂತ್ರಜ್ಞಾನದ ಸೌಲಭ್ಯವಿರದ ಜನರು ಕೋವಿಡ್ ಲಸಿಕೆ ಕೇಂದ್ರದಲ್ಲಿಯೇ ಹೆಸರು ನೋಂದಣಿ ಮಾಡಿಸಬಹುದಿತ್ತು ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.