ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ಒಂದೇ ದಿನದಲ್ಲಿ 30 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ

Last Updated 16 ಮಾರ್ಚ್ 2021, 6:36 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಲ್ಲಿ ಸೋಮವಾರ 30 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ. ಇದು ಒಂದು ದಿನದಲ್ಲಿ ನೀಡಲಾದ ಅತಿ ಹೆಚ್ಚು ಪ್ರಮಾಣದ ಲಸಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

‘15 ದಿನಗಳಲ್ಲಿ ಲಸಿಕೆ ಪಡೆದ 60 ವರ್ಷ ಮೇಲ್ಪಟ್ಟ ಫಲಾನುಭವಿಗಳ ಸಂಖ್ಯೆ 1 ಕೋಟಿಗೆ ತಲುಪಿದೆ’ ಎಂದು ಸಚಿವಾಲಯ ಹೇಳಿದೆ.

‘ಸೋಮವಾರ 24 ಗಂಟೆಗಳಲ್ಲಿ 30,39,394 ಲಸಿಕೆಯ ಡೋಸ್‌ಗಳನ್ನು ನೀಡಲಾಗಿದೆ. 26,27,099 ಫಲಾನುಭವಿಗಳಿಗೆ ಮೊದಲ ಡೋಸ್‌ ಮತ್ತು 4,12,295 ಫಲಾನುಭವಿಗಳಿಗೆ ಎರಡನೇ ಡೋಸ್ ನೀಡಲಾಗಿದೆ’ ಎಂದು ಸಚಿವಾಲಯ ಹೇಳಿದೆ.

‘ದೇಶದಲ್ಲಿ ಈವರೆಗೆ ಒಟ್ಟು 3,29,47,432 ಡೋಸ್‌ಗಳನ್ನು ನೀಡಲಾಗಿದ್ದು, 2,70,79,484 ಮಂದಿ ಮೊದಲ ಡೋಸ್‌ ಮತ್ತು 58,67,948 ಜನರು ಎರಡನೇ ಡೋಸ್‌ ಪಡೆದಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT