ಮಂಗಳವಾರ, ಜನವರಿ 18, 2022
27 °C

ದೆಹಲಿಯ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕೋವಿಡ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಿದ್ದು, ಹೆಚ್ಚುವರಿ ಪೊಲೀಸ್ ಕಮಿಷನರ್ (ಕ್ರೈಮ್ ಬ್ರಾಂಚ್) ಸೇರಿದಂತೆ ದೆಹಲಿಯ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

‘300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಅವರು ಪಡೆಯ ವಿವಿಧ ಘಟಕಗಳಿಗೆ ಸೇರಿದವರು ಮತ್ತು ಸಂಪರ್ಕತಡೆಯಲ್ಲಿದ್ದಾರೆ’ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಪೊಲೀಸರ ಒಟ್ಟು ಸಾಮರ್ಥ್ಯ 80,000ಕ್ಕೂ ಹೆಚ್ಚು.

ಇತ್ತೀಚೆಗೆ, ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಎಸ್‌ಒ‍‍ಪಿ ಹೊರಡಿಸಿದ್ದರು.

ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಮಧ್ಯೆ ಕರ್ತವ್ಯವನ್ನು ನಿರ್ವಹಿಸುವ ಮುಂಚೂಣಿಯ ಕಾರ್ಯಕರ್ತರಾಗಿರುವುದರಿಂದ, ಅವರು ಕೋವಿಡ್‌ಗೆ ಒಡ್ಡಿಕೊಳ್ಳುವ ಸಾಧ್ಯತೆ ಇದ್ದು, ತಮ್ಮನ್ನು ರಕ್ಷಿಸಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಅದರಲ್ಲಿ ತಿಳಿಸಲಾಗಿತ್ತು.

ಎಸ್‌ಒಪಿ ಪ್ರಕಾರ, ಎಲ್ಲಾ ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ನಿಯಮಿತವಾಗಿ ಕೈ ತೊಳೆದುಕೊಳ್ಳುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿತ್ತು.

‘ವೈದ್ಯಕೀಯ ಕಾರಣಗಳಿಂದ ಲಸಿಕೆಯನ್ನು ಪಡೆಯದಿರುವವರು ಲಸಿಕೆಗಾಗಿ ಮತ್ತೊಮ್ಮೆ ವೈದ್ಯಕೀಯ ಅಭಿಪ್ರಾಯವನ್ನು ಪಡೆಯಲು ಪ್ರೋತ್ಸಾಹಿಸಬೇಕು’ಎಂದು ಅದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು