ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ಪ್ರತಿ ನಿಮಿಷಕ್ಕೆ 336 ಮಂದಿಗೆ ಕೋವಿಡ್ ಲಸಿಕೆ: ಮಹಾರಾಷ್ಟ್ರ ಸರ್ಕಾರ

Last Updated 2 ಸೆಪ್ಟೆಂಬರ್ 2021, 5:44 IST
ಅಕ್ಷರ ಗಾತ್ರ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ನಿಮಿಷಕ್ಕೆ 336 ಮಂದಿಗೆ ಕೋವಿಡ್ ಲಸಿಕೆ ಡೋಸ್ ಹಾಕಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಮುಂಬೈಯಲ್ಲಿ ನೀಡಲಾದ ಕೋವಿಡ್ ಲಸಿಕೆ ಡೋಸ್‌ಗಳ ಅಂಕಿಅಂಶಗಳ ಆಧಾರದಲ್ಲಿ ಮಹಾರಾಷ್ಟ್ರ ಸರ್ಕಾರ ವಿವರಣೆ ನೀಡಿದೆ.

ಇಲ್ಲಿಯ ವರೆಗೆ ನಗರದ ಲಸಿಕೆ ಕೇಂದ್ರಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 97 ಲಕ್ಷ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ) ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಕನಿಷ್ಠ 71 ಲಕ್ಷ ಜನರು ಮೊದಲ ಡೋಸ್ ಮತ್ತು 26 ಲಕ್ಷ ಮಂದಿ ಎರಡೂ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

ಮುಂಬೈಯಲ್ಲಿ ಆಗಸ್ಟ್ 21, 27 ಹಾಗೂ 29ರಂದು 1.6 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ವಿತರಿಸಲಾಗಿದ್ದು, ಬುಧವಾರ 1.39 ಲಕ್ಷ ಜನರು ಡೋಸ್ ಪಡೆದಿದ್ದಾರೆ ಎಂದು ಸರ್ಕಾರವು ತಿಳಿಸಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಸಂಭವನೀಯ ಮೂರನೇ ಅಲೆ ಎದುರಿಸಲು ನೆರವಾಗಲಿದೆ ಎಂದು ಸಚಿವ ಆದಿತ್ಯ ಠಾಕ್ರೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT