ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ಈವರೆಗೆ 23.5 ಕೋಟಿ ಡೋಸ್‌ಗೂ ಹೆಚ್ಚು ಲಸಿಕೆ ವಿತರಣೆ

Last Updated 7 ಜೂನ್ 2021, 16:36 IST
ಅಕ್ಷರ ಗಾತ್ರ

ನವದೆಹಲಿ: ಸೋಮವಾರ 31 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ವಿತರಣೆ ಸೇರಿ ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದಲ್ಲಿ ಈವರೆಗೆ 23.59 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಮವಾರ 18-44 ವರ್ಷದೊಳಗಿನ 16,07,531 ಫಲಾನುಭವಿಗಳು ತಮ್ಮ ಮೊದಲ ಡೋಸ್ ಲಸಿಕೆ ಪಡೆದರೆ, ಅದೇ ವಯಸ್ಸಿನ 68,661 ಫಲಾನುಭವಿಗಳು ತಮ್ಮ ಎರಡನೇ ಡೋಸ್ ಪಡೆದಿದ್ಧಾರೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟಾರೆ, ಮೇ 1ರಿಂದ 3ನೇ ಹಂತದ ಲಸಿಕೆ ಅಭಿಯಾನ ಆರಂಭವಾದ ಬಳಿಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3,02,45,100 ಜನರು ತಮ್ಮ ಮೊದಲ ಡೋಸ್ ಮತ್ತು 2,37,107 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು 18-44 ವರ್ಷ ವಯಸ್ಸಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಿವೆ ಎಂದು ಅದು ಹೇಳಿದೆ. .

ಈವರೆಗೆ ದೇಶದಲ್ಲಿ ಲಸಿಕೆ ನೀಡಿಕೆಯ ಸಂಖ್ಯೆ 23.59 ಕೋಟಿ (23,59,39,165) ಮೀರಿದೆ ಎಂದು ಸಂಜೆ 7ರ ತಾತ್ಕಾಲಿಕ ವರದಿಯಲ್ಲಿ ತಿಳಿಸಲಾಗಿದೆ.

ಇದರಲ್ಲಿ ಮೊದಲ ಡೋಸ್ ತೆಗೆದುಕೊಂಡ 99,81,949 ಆರೋಗ್ಯ ಕಾರ್ಯಕರ್ತರು (ಎಚ್‌ಸಿಡಬ್ಲ್ಯು) ಮತ್ತು ಎರಡನೆಯ ಡೋಸ್ ತೆಗೆದುಕೊಂಡ 68,76,906 ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ.

1,62,99,343 ಮುಂಚೂಣಿ ಕಾರ್ಯಕರ್ತರು ಮೊದಲ ಡೋಸ್ ಪಡೆದರೆ, 86,96,391 ಮುಚೂಣಿ ಕಾರ್ಯಕರ್ತರು ಎರಡನೆ ಡೋಸ್ ಪಡೆದಿದ್ದಾರೆ.

18-44 ವರ್ಷ ವಯಸ್ಸಿನ 3,02,45,100 ಮತ್ತು 2,37,107 ಜನರು ಕ್ರಮವಾಗಿ ಮೊದಲ ಮತ್ತು ಎರಡನೆಯ ಡೋಸ್ ಪಡೆದಿದ್ದಾರೆ.

ಅಲ್ಲದೆ, 45 ರಿಂದ 60 ವರ್ಷದವರೆಗಿನ 7,18,38,338 ಮತ್ತು 1,14,36,520 ಫಲಾನುಭವಿಗಳಿಗೆ ಕ್ರಮವಾಗಿ ಮೊದಲ ಮತ್ತು ಎರಡನೆಯ ಡೋಸ್ ನೀಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 6,09,90,200 ಮತ್ತು 1,93,37,311 ಫಲಾನುಭವಿಗಳಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಲಸಿಕೆ ಅಭಿಯಾನದ 143ನೇ ದಿನ ಒಟ್ಟು 31,04,989 ಡೋಸ್ ಲಸಿಕೆ ನೀಡಲಾಗಿದೆ.

ಇದರಲ್ಲಿ, 27,97,493 ಫಲಾನುಭವಿಗಳಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದ್ದು, 3,07,496 ಫಲಾನುಭವಿಗಳಿಗೆ ಎರಡನೇ ಡೊಸ್ ನೀಡಲಾಗಿದೆ ಎಂದು ಸಂಜೆ 7 ಗಂಟೆಯವರೆಗಿನ ತಾತ್ಕಾಲಿಕ ವರದಿಯಲ್ಲಿ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT