ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 40.31 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ. 1.92 ಕೋಟಿಗೂ ಹೆಚ್ಚು ಡೋಸ್ ಲಸಿಕೆರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನೂ 83,85,790 ಡೋಸ್ ಲಸಿಕೆ ಸದ್ಯದಲ್ಲೇ ಲಭ್ಯವಾಗಲಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
‘ಎಲ್ಲ ಮೂಲಗಳ ಮೂಲಕ ಇಲ್ಲಿಯವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 40.31 ಕೋಟಿ (40,31,74,380) ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಇನ್ನೂ 83,85,790 ಡೋಸ್ ಲಸಿಕೆ ಸರಬರಾಜು ಹಂತದಲ್ಲಿದೆ. ವೇಸ್ಟೇಜ್ ಸೇರಿದಂತೆ ಒಟ್ಟು 38,39,02,614 ಡೋಸ್ (ಗುರುವಾರ ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ) ಲಸಿಕೆ ಬಳಕೆ ಮಾಡಲಾಗಿದೆ.’ ಎಂದು ಸಚಿವಾಲಯ ತಿಳಿಸಿದೆ.
ಕೋವಿಡ್ ಲಸಿಕಾ ಅಭಿಯಾನದ ಸಾರ್ವತ್ರಿಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಶೇ. 75 ರಷ್ಟು ಲಸಿಕೆಗಳನ್ನು ಸಂಗ್ರಹಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.