ಶುಕ್ರವಾರ, ಏಪ್ರಿಲ್ 23, 2021
28 °C

42 ಸಾವಿರ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ: ರಮೇಶ್ ಪೋಖ್ರಿಯಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ದೇಶದಾದ್ಯಂತ ಸುಮಾರು 42 ಸಾವಿರ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ. ಹಾಗೆಯೇ 15 ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಮಾಹಿತಿ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ (ಯುಡಿಐಎಸ್ಇ) ಅಂಕಿಅಂಶಗಳನ್ನು ಉಲ್ಲೇಖ ಮಾಡಿದ್ದಾರೆ.

ಯುಡಿಐಎಸ್ಇ ಪ್ರಕಾರ, 2018–19ರ ಸಾಲಿನಲ್ಲಿ ದೇಶದ ಒಟ್ಟು 10,83,747 ಸರ್ಕಾರಿ ಶಾಲೆಗಳಲ್ಲಿ 10,41,327 ಶಾಲೆಗಳು ಕುಡಿಯುವ ನೀರು ಸೌಲಭ್ಯ ಹೊಂದಿತ್ತು. ಇದರಲ್ಲಿ 10,68, 726 ಶಾಲೆಗಳಲ್ಲಿ ಶೌಚಾಲಯ ಸೌಕರ್ಯಗಳಿತ್ತು ಎಂದು ಅವರು ತಿಳಿಸಿದ್ದಾರೆ.

‘ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ವ್ಯಾಪ್ತಿಯ ಖಾಸಗಿ, ಅನುದಾನಿತ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಲ್ಲಿ ಹೆಣ್ಣುಮಕ್ಕಳು ಹಾಗೂ ಬಾಲಕರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಹಾಗೂ ಮಕ್ಕಳಿಗೆ ಕುಡಿಯುವ ನೀರನ್ನು ಅಗತ್ಯವಾಗಿ ಒದಗಿಸಬೇಕು ಎಂದು ಪದೇ ಪದೇ ಸಲಹೆ ನೀಡಲಾಗಿದೆ‘ ಎಂದು ಸಚಿವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು