ಸೋಮವಾರ, ಜುಲೈ 4, 2022
24 °C

ದೇಶದ ವಿವಿಧ ಕೋರ್ಟ್‌ಗಳಲ್ಲಿ 4.70 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ 

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ:  ಸುಪ್ರೀಂ ಕೋರ್ಟ್‌ನಲ್ಲಿರುವ 70,154 ಪ್ರಕರಣಗಳೂ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ 4.70 ಕೋಟಿಗೂ ಹೆಚ್ಚು ಕೇಸುಗಳು ಬಾಕಿ ಉಳಿದಿವೆ ಎಂದು ಲೋಕಸಭೆಗೆ ಶುಕ್ರವಾರ ಮಾಹಿತಿ ನೀಡಲಾಗಿದೆ.

ಈ ವರ್ಷದ ಮಾರ್ಚ್ 21ರ ವೇಳೆಗೆ ದೇಶದ 25 ಹೈಕೋರ್ಟ್‌ಗಳಲ್ಲಿ ಒಟ್ಟು 58,94,060 ಪ್ರಕರಣಗಳು ಬಾಕಿ ಉಳಿದಿವೆ.  

ವಿವಿಧ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 4,10,47,976 ಪ್ರಕರಣಗಳು ಬಾಕಿ ಉಳಿದಿವೆ ಎಂದು ಕಾನೂನು ಸಚಿವ ಕಿರಣ್‌ ರಿಜುಜು ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. 

ಅರುಣಾಚಲ ಪ್ರದೇಶ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಅಂಕಿಅಂಶಗಳು ರಾಷ್ಟ್ರೀಯ ನ್ಯಾಯಾಂಗದ ಡೇಟಾ ಗ್ರಿಡ್‌ನಲ್ಲಿ ಲಭ್ಯವಿಲ್ಲ ಎಂದು ಉತ್ತರದಲ್ಲಿ ಉಲ್ಲೇಖಿಸಲಾಗಿದೆ.

ಬಾಕಿ ಉಳಿದಿರುವ ಒಟ್ಟು ಪ್ರಕರಣಗಳ ಸಂಖ್ಯೆ 4,70,12,190 ಆಗಿದೆ ಎಂದು ರಿಜಿಜು ಇದೇ ವೇಳೆ ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು