ದೆಹಲಿ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ, ಗುಡಿಸಲುಗಳ ಆಹುತಿ

ನವದೆಹಲಿ: ‘ಆಗ್ನೇಯ ದೆಹಲಿಯ ಕಾಳಿಂದಿ ಕುಂಜ್ ಮೆಟ್ರೊ ನಿಲ್ದಾಣದ ಬಳಿಯಿರುವ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಲ್ಲಿ 56 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
‘ಈ ಬಗ್ಗೆ ಶನಿವಾರ ರಾತ್ರಿ 11.55ಕ್ಕೆ ನಮಗೆ ಮಾಹಿತಿ ಸಿಕ್ಕಿತು. ತಕ್ಷಣವೇ ಐದು ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು. ಭಾನುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ’ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
‘ರೋಹಿಂಗ್ಯಾ ನಿರಾಶ್ರಿತರ 270 ಕುಟುಂಬಗಳ ಪೈಕಿ 56 ಕುಟುಂಬಗಳ ಗುಡಿಸಲುಗಳು ಸುಟ್ಟು ಹೋಗಿವೆ. ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ’ ಎಂದು ಡಿಸಿಪಿ (ಆಗ್ನೇಯ) ಪಿ.ಆರ್ ಮೀನಾ ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.