ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಯ್ಡಾದ ಅವಳಿ ಕಟ್ಟಡ ಇಂದು ನೆಲಸಮ: 500 ಪೊಲೀಸ್, ಸಂಚಾರ ಸಿಬ್ಬಂದಿ ನಿಯೋಜನೆ

Last Updated 28 ಆಗಸ್ಟ್ 2022, 7:04 IST
ಅಕ್ಷರ ಗಾತ್ರ

ನೋಯ್ಡಾ:ನಗರದಲ್ಲಿ ಇಂದು (ಭಾನುವಾರ) ನೆಲಸಮಗೊಳ್ಳಲಿರುವ ಬಹು ಮಹಡಿ ಅವಳಿ ಕಟ್ಟಡದ ಸುತ್ತಲೂ ನಾಗರಿಕರ ಸುರಕ್ಷತೆ ಹಾಗೂ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಸಲುವಾಗಿ ಪ್ರಾಂತೀಯ ಸಶಸ್ತ್ರ ಪಡೆಗಳ (ಪಿಎಸಿ) ಜೊತೆಗೆ 500 ಪೊಲೀಸ್‌ ಹಾಗೂ ಸಂಚಾರ ದಳಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಎಮರಾಲ್ಡ್ ಕೋರ್ಟ್ ಸೊಸೈಟಿ ಆವರಣದಲ್ಲಿ ನಿಯಮಬಾಹಿರವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಮಧ್ಯಾಹ್ನ 2.30ಕ್ಕೆ ನೆಲಸಮಗೊಳಿಸಲು ಸಮಯ ನಿಗದಿಯಾಗಿದೆ. ಇದಕ್ಕಾಗಿ 3,700 ಕೆ.ಜಿ ಸ್ಫೋಟಕಗಳನ್ನು ಬಳಸಲಾಗುತ್ತದೆ.ಕಟ್ಟಡದ ಸುತ್ತಲಿನ 500 ಚದರ ಮೀಟರ್‌ ಪ್ರದೇಶವನ್ನು ನಿಷೇಧಿತ ವಲಯ ಎಂದು ಘೋಷಿಸಲಾಗಿದೆ.

ಸದ್ಯಸೆಕ್ಟರ್ 93ಎ ಪ್ರದೇಶದಲ್ಲಿರುವ ಎಮರಾಲ್ಡ್ ಕೋರ್ಟ್ ಮತ್ತು ಎಟಿಎಸ್ ವಿಲೇಜ್ ಸೊಸೈಟಿಗಳ ಎಲ್ಲ ನಿವಾಸಿಗಳನ್ನು ಸ್ಥಳಾಂತರಿಸುವ ಕಾರ್ಯ ಬೆಳಗ್ಗೆ 8ರ ಸುಮಾರಿಗೆ ಪೂರ್ಣಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

‌ಕಟ್ಟಡ ತೆರವು ಕಾರ್ಯಾಚರಣೆಯ ಮೇಲ್ವಿಚಾರಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳಲ್ಲಿ ಒಬ್ಬರಾದ ಡಿಸಿಪಿ ರಾಜೇಶ್‌ ಎಸ್‌., 'ಸುಮಾರು 400 ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆಗೆ ನಿಯೋಜನೆಗೊಂಡಿದ್ದಾರೆ' ಎಂದು ತಿಳಿಸಿದ್ದಾರೆ.

'ಕಟ್ಟಡ ಸುತ್ತಲಿನ ಪ್ರದೇಶದಲ್ಲಿ ನಿರ್ಬಂಧಗಳನ್ನು ಹೇರಲಾಗಿದೆ. ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ನೋಯ್ಡಾದ ಎಲ್ಲ ಪ್ರಮುಖ ಜಂಕ್ಷನ್‌ಗಳಲ್ಲಿ 150–200 ಸಂಚಾರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ' ಎಂದು ಡಿಸಿಪಿ (ಸಂಚಾರ)ಗಣೇಶ್ ಸಹಾ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT