ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌: ಪ್ರಮುಖ ಔಷಧಿ ತಯಾರಿಕಾ ಕಂಪನಿಗಳಿಗೆ 64 ರಾಯಭಾರಿಗಳ ಭೇಟಿ

Last Updated 9 ಡಿಸೆಂಬರ್ 2020, 10:23 IST
ಅಕ್ಷರ ಗಾತ್ರ

ಹೈದರಾಬಾದ್‌: ಹೈದರಾಬಾದ್‌ನಲ್ಲಿರುವ ಪ್ರಮುಖ ಔಷಧಿ ತಯಾರಿಕಾ ಕಂಪನಿಗಳಾದ ಭಾರತ್‌ ಬಯೋಟೆಕ್‌ ಹಾಗೂ ‘ಬಯೋಲಾಜಿಕಲ್‌ ಇ’ ಗೆ 60ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಬುಧವಾರ ಭೇಟಿ ನೀಡಿದರು.

ಈ ಕಂಪನಿಗಳಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೋವಿಡ್‌–19 ಲಸಿಕೆ ಕುರಿತು ಮಾಹಿತಿ ಪಡೆದುಕೊಂಡರು.

‘ಇದೇ ಮೊದಲ ಬಾರಿಗೆ 60 ಹೆಚ್ಚು ದೇಶಗಳ ರಾಯಭಾರಿಗಳು ಹೈದರಾಬಾದ್‌ನಲ್ಲಿರುವ ಭಾರತ್‌ ಬಯೋಟೆಕ್‌, ಬಯೋಲಾಜಿಕಲ್‌ ಇ ಕಂಪನಿಗಳ ಭೇಟಿಗೆ ವ್ಯವಸ್ಥೆ ಮಾಡಲಾಗಿತ್ತು. ಸಂಶೋಧನೆ ಮತ್ತು ಉತ್ಪಾದನೆಗೆ ಇಲ್ಲಿಸುವ ಸೌಲಭ್ಯಗಳು ಕುರಿತು ಅವರಿಗೆ ಮಾಹಿತಿ ನೀಡಲಾಯಿತು’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ ಟ್ವೀಟ್‌ ಮಾಡಿದ್ದಾರೆ.

ಭಾರತ್‌ ಬಯೋಟೆಕ್‌ನ ಚೇರಮನ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಕೃಷ್ಣ ಎಲ್ಲಾ ಅವರು ಭಾರತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಲಸಿಕೆಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT