ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ಈವರೆಗೆ 79.58 ಕೋಟಿ ಕೋವಿಡ್ ಲಸಿಕೆ ಡೋಸ್‌ ಪೂರೈಕೆ: ಕೇಂದ್ರ ಸರ್ಕಾರ

Last Updated 20 ಸೆಪ್ಟೆಂಬರ್ 2021, 6:04 IST
ಅಕ್ಷರ ಗಾತ್ರ

ನವದೆಹಲಿ: 79.58 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್‌ಗಳನ್ನು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಇದಲ್ಲದೆ, 15 ಲಕ್ಷಕ್ಕೂ ಅಧಿಕ ಡೋಸ್‌ಗಳು ಪೂರೈಕೆ ಹಂತದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

5.43 ಕೋಟಿಗೂ ಹೆಚ್ಚು ಉಳಿಕೆ ಮತ್ತು ಬಳಕೆಯಾಗದ ಕೋವಿಡ್-19 ಲಸಿಕೆ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಲಸಿಕೆ ಡೋಸ್‌ಗಳು ಲಭ್ಯತೆಯಿರುವಂತೆ ಮಾಡುವ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಲಸಿಕೆ ಅಭಿಯಾನಕ್ಕೆ ವೇಗ ಸಿಕ್ಕಿದೆ ಎಂದೂ ಹೇಳಿದೆ.

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT