ಸೋಮವಾರ, ಅಕ್ಟೋಬರ್ 18, 2021
25 °C

82.57 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ ಪೂರೈಕೆ– ಆರೋಗ್ಯ ಸಚಿವಾಲಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 82.57 ಕೋಟಿ ಡೋಸ್‌ ಲಸಿಕೆ ಪೂರೈಸಲಾಗಿದೆ. 94 ಲಕ್ಷ ಡೋಸ್‌ಗಳನ್ನು ಪೂರೈಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಪ್ರಸ್ತುತ, ಲಸಿಕೆಯ 4.15 ಕೋಟಿ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿವೆ. ಲಸಿಕೆ ನೀಡಿಕೆಯ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಲಸಿಕೆ ಲಭ್ಯವಿರುವಂತೆ ನೋಡಿಕೊಳ್ಳಲು ‌ಮುಂಗಡವಾಗಿ ಲಸಿಕೆಗಳನ್ನು ಪೂರೈಸಲಾಗುತ್ತಿದೆ ಎಂದೂ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು