ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲ್ಲಿವರೆಗೆ 86.51 ಕೋಟಿ ಡೋಸ್‌ ಕೋವಿಡ್‌ ಲಸಿಕೆ ಪೂರೈಕೆ: ಆರೋಗ್ಯ ಸಚಿವಾಲಯ

Last Updated 30 ಸೆಪ್ಟೆಂಬರ್ 2021, 9:38 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ಈವರೆಗೆ ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಹಾಗೂ ನೇರ ರಾಜ್ಯ ಖರೀದಿ ಅಡಿಯಲ್ಲಿ 86.51ಕೋಟಿಗೂ ಹೆಚ್ಚು ಡೋಸ್‌ಗಳಷ್ಟು ಕೋವಿಡ್‌–19 ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಇನ್ನೂ 63.69 ಲಕ್ಷ ಡೋಸ್‌ಗಳಿಗೂ ಹೆಚ್ಚು ಕೋವಿಡ್‌ ಲಸಿಕೆಗಳು ಪೂರೈಕೆ ಹಂತದಲ್ಲಿವೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಪ್ರಸ್ತುತ 5,00,46,000 ಡೋಸ್‌ ಲಸಿಕೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಲಭ್ಯವಿದೆ ಎಂದು ಅದು ಹೇಳಿದೆ.

ಕೇಂದ್ರ ಸರ್ಕಾರವು ಲಸಿಕೆ ನೀಡುವಿಕೆಯ ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಲಭ್ಯತೆಯಿರುವಂತೆ ಮಾಡುವ ಮೂಲಕ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯ ನೆರವು ನೀಡಲು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಭ್ಯವಿರುವ ಮತ್ತು ಬೇಡಿಕೆಯಿರುವ ಲಸಿಕೆ ಪ್ರಮಾಣದ ಆಧಾರದ ಮೇಲೆ ಲಸಿಕೆಗಳ ಪೂರೈಕೆಗೆ ಜಾಲವನ್ನು ವ್ಯವಸ್ಥಿತವಾಗಿಸಲು ಯೋಜನೆ ರೂಪಿಸಲಾಗುತ್ತಿದೆ‘ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT