ಶನಿವಾರ, ಮಾರ್ಚ್ 25, 2023
24 °C

‘9.79 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ’: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ‘ಕೇಂದ್ರ ಸರ್ಕಾರದ 78 ವಿವಿಧ ಸಚಿವಾಲಯ ಹಾಗೂ ಇಲಾಖೆಗಳಲ್ಲಿ 9.79 ಲಕ್ಷಕ್ಕೂ ಹೆಚ್ಚಿನ ಹುದ್ದೆಗಳು ಖಾಲಿಯಿವೆ’ ಎಂದು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಅವರು ರಾಜ್ಯಸಭೆಗೆ ಗುರುವಾರ ಮಾಹಿತಿ ನೀಡಿದರು.

‘ರೈಲ್ವೆ ಇಲಾಖೆಯಲ್ಲಿ 2.93 ಲಕ್ಷ, ರಕ್ಷಣಾ ಇಲಾಖೆಯಲ್ಲಿ 2.64 ಲಕ್ಷ, ಗೃಹ ಇಲಾಖೆಯಲ್ಲಿ 1.43 ಲಕ್ಷ ಹುದ್ದೆಗಳು ಖಾಲಿಯಿವೆ. ದೇಶದಲ್ಲಿ ‘ರೋಜ್‌ಗಾರ್‌ ಮೇಳ’ ಜಾರಿಯಲ್ಲಿದ್ದು, ಉದ್ಯೋಗ ಹಾಗೂ ಸ್ವ–ಉದ್ಯೋಗ ಸೃಷ್ಟಿಗೆ ಈ ಮೇಳವು ಹೆಚ್ಚಿನ ಒತ್ತು ನೀಡಲಿದೆ’ ಎಂದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾರಿ ಮಾಡಿಕೊಳ್ಳಲು ರಾಷ್ಟ್ರೀಯ ನೇಮಕ ಸಂಸ್ಥೆಯನ್ನು ರಚಿಸಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು