ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಕ್ಸೋ: ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳೇ ಶೇ 99 ರಷ್ಟು -ಎನ್‌ಸಿಆರ್‌ಬಿ

Last Updated 11 ಅಕ್ಟೋಬರ್ 2021, 10:46 IST
ಅಕ್ಷರ ಗಾತ್ರ

ನವದೆಹಲಿ: 2020ರಲ್ಲಿ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿರುವ ಅಪರಾಧ ಪ್ರಕರಣಗಳ ಪೈಕಿ ಶೇ 99 ಕ್ಕಿಂತ ಹೆಚ್ಚು ಪ್ರಕರಣಗಳು ಹೆಣ್ಣುಮಕ್ಕಳಿಗೆ ಸಂಬಂಧಿಸಿದ್ದಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯ (ಎನ್‌ಸಿಆರ್‌ಬಿ) ಅಂಕಿ ಅಂಶಗಳು ಮಾಹಿತಿ ನೀಡಿವೆ.

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚು ಎಂದೂ ಹೇಳಲಾಗಿದೆ.

ಹೆಣ್ಣುಮಕ್ಕಳು ಇನ್ನೂ ಸಮಾಜದ ಅತ್ಯಂತ ದುರ್ಬಲ ವರ್ಗದ ಭಾಗವಾಗಿ ಮುಂದುವರೆದಿದ್ದಾರೆ ಎಂಬುದನ್ನು ಈ ಅಂಕಿಅಂಶಗಳು ತೋರಿಸಿವೆ.

ಮಕ್ಕಳ ಹಕ್ಕುಗಳು ಮತ್ತು ನೀವು (ಸಿಆರ್‌ಐ) ಎಂಬ ಎನ್‌ಜಿಒ ಇತ್ತೀಚೆಗೆ ಎನ್‌ಸಿಆರ್‌ಬಿ ದತ್ತಾಂಶಗಳ ವಿಶ್ಲೇಷಣೆ ನಡೆಸಿದೆ. ಇದರ ಪ್ರಕಾರ ಪೋಕ್ಸೋ ಕಾಯ್ದೆಯಡಿ ವರದಿಯಾದ ಅಪರಾಧಗಳಲ್ಲಿ ಸಂತ್ರಸ್ತರಾದ 28,327 ಮಕ್ಕಳಲ್ಲಿ 28,058 ಬಾಲಕಿಯರಿದ್ದಾರೆ ಎಂಬ ಕಳವಳಕಾರಿ ಅಂಶ ವಿಶ್ಲೇಷಣೆಯಲ್ಲಿ ತಿಳಿದು ಬಂದಿದೆ.

12 ರಿಂದ 16 ವರ್ಷದ 10,949 ಹುಡುಗಿಯರು ಮತ್ತು 16 ರಿಂದ 18 ವರ್ಷದೊಳಗಿನ 14,092 ಬಾಲಕಿಯರು ಪೋಕ್ಸೋ ಅಪರಾಧ ಕೃತ್ಯಗಳಲ್ಲಿ ಸಂತ್ರಸ್ತರಾಗಿದ್ದಾರೆ ಎಂದು ಅಂಕಿ ಅಂಶಗಳ ವಿಶ್ಲೇಷಣೆಯು ಹೇಳಿದೆ.

ಸೋಮವಾರ ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಸಂದರ್ಭದಲ್ಲಿ ಸಿಆರ್‌ಐ ಸಂಸ್ಥೆಯು ಪ್ರಪಂಚದಾದ್ಯಂತ ಹೆಣ್ಣು ಮಕ್ಕಳಿಗಿರುವ ಹಕ್ಕುಗಳ ಕುರಿತು ಮಾತನಾಡುತ್ತಿದೆ. ಆದರೆ ಎನ್‌ಸಿಆರ್‌ಬಿ ಅಂಕಿ ಅಂಶಗಳು ಸಮಾಜದಲ್ಲಿ ಹೆಣ್ಣು ಮಕ್ಕಳು ಸಮಾಜದ ಅತ್ಯಂತ ದುರ್ಬಲ ವರ್ಗಗಳಲ್ಲಿ ಒಂದಾಗಿ ಬದುಕುತ್ತಿದ್ದಾರೆ ಎಂದು ಹೇಳಿವೆ.

ಎನ್‌ಸಿಆರ್‌ಬಿ ಕಳೆದ ತಿಂಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, 2020ರಲ್ಲಿ ಪೋಕ್ಸೋ ಕಾಯ್ದೆಯಡಿ ಶೇ 99ಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಹೆಣ್ಣು ಮಕ್ಕಳಿಗಿರುವ ಅಸುರಕ್ಷತೆಯನ್ನು ಈ ಮಾಹಿತಿ ತೋರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT