ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಸಿದ ಆಹಾರ: 100ಕ್ಕೂ ಅಧಿಕ ಮಂದಿ ಅಸ್ವಸ್ಥ

Last Updated 2 ಜನವರಿ 2023, 2:21 IST
ಅಕ್ಷರ ಗಾತ್ರ

ಪತ್ತನಂತಿಟ್ಟ, ಕೇರಳ: ಇಲ್ಲಿನ ಕೀಳವೈಪುರದ ಚರ್ಚ್‌ನಲ್ಲಿ ನಡೆದಿದ್ದ ದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರ ಪೈಕಿ 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಹಳಸಿದ ಆಹಾರ ಸೇವನೆ ಇದಕ್ಕೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಈ ಸಂಬಂಧ ಶೀಘ್ರವೇ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತಾ ಇಲಾಖೆಗೆ ಸೂಚಿಸಿದ್ದಾರೆ.

ಆಹಾರ ಪೂರೈಕೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆಹಾರ ಪದಾರ್ಥ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT