ಶನಿವಾರ, ಸೆಪ್ಟೆಂಬರ್ 25, 2021
29 °C

ನೋಡಿ: ರಸ್ತೆ ದಾಟಿದ 3000ಕ್ಕೂ ಹೆಚ್ಚು ಕೃಷ್ಣಮೃಗಗಳು- ಕೊಂಡಾಡಿದ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ವನ್ಯಮೃಗಗಳ ಸಂಚಾರವನ್ನು ನೋಡುವುದೇ ಚೆಂದ. ಗುಜರಾತಿನಲ್ಲಿ ಕೃಷ್ಣಮೃಗಗಳು ಹಿಂಡು ಹಿಂಡಾಗಿ  ರಸ್ತೆ ದಾಟುತ್ತಿರುವ ವಿಡಿಯೊ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ಗುಜರಾತಿನ ಭಾವನಗರದ ಕೃಷ್ಣಮೃಗಗಳ ರಾಷ್ಟ್ರೀಯ ಉದ್ಯಾನದಲ್ಲಿ 3000 ಕ್ಕೂ ಹೆಚ್ಚು ಕೃಷ್ಣಮೃಗಗಳು ರಸ್ತೆ ದಾಟುತ್ತಿರುವುದು ಕಂಡುಬಂದಿದೆ. 

ಗುಜರಾತಿನ ಮಾಹಿತಿ ಇಲಾಖೆಯ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದ್ದು, 20 ಗಂಟೆಗಳಲ್ಲಿ 6 ಲಕ್ಷಕ್ಕೂ ಅಧಿಕ ವೀವ್ಸ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಸಹ ಈ ಟ್ವೀಟ್ ಅನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ರೀಟ್ವೀಟ್ ಮಾಡಿದ್ದು, ಎಕ್ಸಲೆಂಟ್ ಎಂದು ಕೊಂಡಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು