ಕೋಲ್ಕತ್ತ: ’ಬಿಜೆಪಿಯ ಕೆಲವು ನಾಯಕರಲ್ಲಿದ್ದ ಅತಿಯಾದ ಆತ್ಮವಿಶ್ವಾಸದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಯಿತು’ ಎಂದು ಪಶ್ವಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅಭಿಪ್ರಾಯಪಟ್ಟರು.

ಟಿಎಂಸಿ ಪಕ್ಷ ತೊರೆದು ಬಿಜೆಪಿ ಸೇರಿದ ನಂತರ ಇದೇ ಮೊದಲ ಬಾರಿಗೆ ಅವರು ಸಾರ್ವಜನಿಕವಾಗಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾದ ಸೋಲಿನ ಬಗ್ಗೆ ಪರಾಮರ್ಶಿಸಿದರು.

ಪುರ್ಬಾ ಮದಿನಿಪುರ ಜಿಲ್ಲೆಯ ಚಂಡೀಪುರದಲ್ಲಿ ಭಾನುವಾರ ನಡೆದ ಪಕ್ಷದ ಸಭೆಯಲ್ಲಿ ಸುವೇಂದು ಮಾತನಾಡಿ, ’ಗೆದ್ದುಬಿಟ್ಟೆವು ಎನ್ನುವ ಸಂತೃಪ್ತಭಾವ ಮತ್ತು ಗೆದ್ದೇಗೆಲ್ಲುತ್ತೇವೆಂಬ ಆತ್ಮವಿಶ್ವಾಸ ಮತ್ತು ತಳಮಟ್ಟದ ರಾಜಕೀಯ ಪರಿಸ್ಥಿತಿಯನ್ನು ಸರಿಯಾರಿ ಅರ್ಥ ಮಾಡಿಕೊಳ್ಳುವಲ್ಲಿ ಸೋತಿದ್ದರಿಂದಲೇ, ಚುನಾವಣೆಯಲ್ಲಿ ಹೆಚ್ಚಿನ ಮತ ಪಡೆಯಲು ಸಾಧ್ಯವಾಗಲಿಲ್ಲ’ ಎಂದು ವಿಶ್ಲೇಷಿಸಿದರು.

’ಚುನಾವಣೆಯ ಮೊದಲ ಎರಡು ಹಂತದಲ್ಲಿ ನಾವೆಲ್ಲ ಚೆನ್ನಾಗಿ ಕೆಲಸ ಮಾಡಿದೆವು. ಆದರೆ, 170 ರಿಂದ 180 ಸ್ಥಾನಗಳನ್ನು ಗೆಲ್ಲುತ್ತೇವೆಂಬ ಅತಿಯಾದ ಆತ್ಮವಿಶ್ವಾಸ ಹೊಂದಿದ್ದ ನಮ್ಮ ಪಕ್ಷದ ನಾಯಕರು, ತಳಮಟ್ಟದಲ್ಲಿ ಸರಿಯಾಗಿ ಕೆಲಸ ಮಾಡಿರಲಿಲ್ಲ. ಹೀಗಾಗಿ ಟಿಎಂಸಿಗೆ ಅಧಿಕಾರ ಬಿಟ್ಟುಕೊಡುವಂತಾಯಿತು’ ಎಂದು ಹೇಳಿದರು.

ನಿಗದಿತ ಗುರಿಗಳನ್ನಿಟ್ಟುಕೊಂಡ ನಂತರ, ಅದನ್ನು ತಲುಪಲು ಅಷ್ಟೇ ಪರಿಶ್ರಮದೊಂದಿಗೆ ಕೆಲಸ ಮಾಡಬೇಕುಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.