ಬುಧವಾರ, ಆಗಸ್ಟ್ 10, 2022
20 °C

'ಬಾಬಾ ಕಾ ಡಾಬಾ'ದ ಮಾಲೀಕ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದಕ್ಷಿಣ ದೆಹಲಿಯ 'ಬಾಬಾ ಕಾ ಡಾಬಾ'ದ ಮಾಲೀಕ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಸಫ್ದರ್‌ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

81 ವರ್ಷದ ಪ್ರಸಾದ್ ಗುರುವಾರ ಆತ್ಮಹತ್ಯಗೆ ಯತ್ನಿಸಿದ್ದಾರೆ. ಇದರ ಹಿಂದಿನ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ 11.15ಕ್ಕೆ ಪ್ರಸಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಫ್ದರ್‌ಜಂಗ್‌ ಆಸ್ಪತ್ರೆಯಿಂದ ಮಾಹಿತಿ ಬಂದಿದೆ. ಬಳಿಕ ಮಾಹಿತಿ ಸಂಗ್ರಹಿಸಿರುವ ಪೊಲೀಸರು ದೂರು ದಾಖಲಿಸಿದ್ದಾರೆ. ಮದ್ಯಪಾನ ಹಾಗೂ ನಿದ್ರಾ ಮಾತ್ರೆಗಳು ಪ್ರಜ್ಞಾಹೀನತೆಗೆ ಕಾರಣವಾಗಿದೆ ಎಂಬುದು ಉಲ್ಲೇಖವಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅತುಲ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.

ಪ್ರಸಾದ್ ಅವರ ಪುತ್ರ ಕರಣ್ ಹೇಳಿಕೆಯನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಕಳೆದ ವರ್ಷ ಕೋವಿಡ್ ಲಾಕ್‌ಡೌನಿಂದಾಗಿ ಹೋಟೆಲ್‌ನಲ್ಲಿ ಗ್ರಾಹಕರ ಕೊರತೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವುದರ ಬಗ್ಗೆ ಪ್ರಸಾದ್ ಕಣ್ಣೀರಿಡುತ್ತಾ ಮಾತನಾಡಿರುವ ವಿಡಿಯೊ ವೈರಲ್ ಆಗಿತ್ತು. ಈ ವಿಡಿಯೊವನ್ನು ಯೂಟ್ಯೂಬರ್ ಗೌರವ್ ವಾಸನ್ ಎಂಬುವವರು ಬಿಡುಗಡೆಗೊಳಿಸಿದ್ದರು.

ಬಳಿಕ ನನ್ನ ಹೆಸರನ್ನು ಹೇಳಿಕೊಂಡು ದೇಣಿಗೆ ಮೊತ್ತವನ್ನು ವಸೂಲಿ ಮಾಡಿದ್ದಾರೆ ಎಂದು ವಾಸನ್ ವಿರುದ್ಧ ದೂರು ದಾಖಲಿಸಿದ್ದರು.

ಗ್ರಾಹಕರಿಲ್ಲದೆ ನಷ್ಟವನ್ನು ಅನುಭವಿಸಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಮುಚ್ಚಿದ್ದರು. ಇತ್ತೀಚಿಗೆ ಡಾಬಾಕ್ಕೆ ತೆರಳಿದ ಪ್ರಸಾದ್ ಅವರು ವಾಸನ್ ಬಳಿ ಕ್ಷಮೆಯಾಚಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು