ಗುರುವಾರ , ಜೂನ್ 24, 2021
27 °C

ಗೋವಾದಲ್ಲಿ ಸುಧಾರಿಸಿದ ಆಕ್ಸಿಜನ್‌ ಕೊರತೆ ಸಮಸ್ಯೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಪಣಜಿ: ‘ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಮ್ಲಜನಕದ ಹೊಸ ಟ್ಯಾಂಕ್‌ ನಿಯೋಜಿಸಲಾಗಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಸುಧಾರಣೆ ಕಂಡುಬಂದಿದೆ’ ಎಂದು ಗೋವಾದ ಆರೋಗ್ಯ ಸಚಿವ ವಿಶ್ವಜಿತ್‌ ರಾಣೆ ಅವರು ಭಾನುವಾರ ತಿಳಿಸಿದರು.

‘ಕಳೆದ ಐದು ದಿನಗಳಲ್ಲಿ (ಶನಿವಾರ ಬೆಳಿಗ್ಗೆ ತನಕ) ಬೆಳಿಗ್ಗೆ 2 ರಿಂದ ಬೆಳಿಗ್ಗೆ 6 ರ ನಡುವಿನ  ಅವಧಿಯಲ್ಲಿ ಆಮ್ಲಜನಕ ಕೊರತೆಯಿಂದ 83 ರೋಗಿಗಳು ಈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.

‘20,000 ಕಿ.ಲೀ ಸಾಮರ್ಥ್ಯದ ಆಮ್ಲಜನಕ ಟ್ಯಾಂಕನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ(ಜಿಎಂಸಿಎಚ್‌) ಶನಿವಾರ ನಿಯೋಜಿಸಲಾಗಿದೆ. ಈ ಬಳಿಕ ಆಸ್ಪತ್ರೆಯಲ್ಲಿ ಪರಿಸ್ಥಿತಿ ಸುಧಾರಿಸಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಭಾವಿಸುತ್ತೇನೆ ’ ಎಂದು ಅವರು ಹೇಳಿದರು.

‘ಬಿಚೋಲಿಮ್ ಕೈಗಾರಿಕಾ ಎಸ್ಟೇಟ್‌ನಿಂದ ಆಮ್ಲಜನಕ ಟ್ಯಾಂಕ್‌ ಅನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದರಿಂದಾಗಿ ಆಮ್ಲಜನಕ ಸಿಲಿಂಡರ್‌ಗಳ ಮೇಲೆ ಅವಲಂಬನೆಯು ಕಡಿಮೆಯಾಗಲಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಶನಿವಾರ ಮಾಹಿತಿ ನೀಡಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು