ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ವಾಪಸ್ ಕೊಡಿ: ಪಿ. ಚಿದಂಬರಂ

Last Updated 21 ಜೂನ್ 2021, 6:43 IST
ಅಕ್ಷರ ಗಾತ್ರ

ನವದೆಹಲಿ: ‘ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ‘ರಾಜ್ಯ‘ದ ಸ್ಥಾನಮಾನ ನೀಡುವಂತೆ ಒತ್ತಾಯಿಸಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಮುಂಬರುವ ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಿ, ಕಾಶ್ಮೀರದಲ್ಲಿ ಜಾರಿ ಮಾಡಿರುವ ‘ಅಹಿತಕರ‘ ಕಾನೂನುಗಳನ್ನು ರದ್ದುಗೊಳಿಸಿ, ಯಥಾಸ್ಥಿತಿಯನ್ನು ಮರು ಸ್ಥಾಪಿಸಬೇಕು‘ ಎಂದು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಜೂನ್ 24ರಂದು ಜಮ್ಮು ಮತ್ತು ಕಾಶ್ಮೀರದ 14 ರಾಜಕೀಯ ಮುಖಂಡರು ಮತ್ತು ನಾಲ್ವರು ಮಾಜಿ ಮುಖ್ಯಮಂತ್ರಿಗಳನ್ನು ಮಾತುಕತೆಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಚಿದಂಬರಂ ಈ ಕುರಿತು ಟ್ವೀಟ್‌ ಮಾಡಿದ್ದಾರೆ.

‘ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವುದೊಂದೇ ಪ್ರಸ್ತುತ ಕಾಶ್ಮೀರದ ಸಮಸ್ಯೆಗಿರುವ ಏಕೈಕ ರಾಜಕೀಯ ಪರಿಹಾರ’ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಸಂವಿಧಾನ ಮೂಲಕ ಒದಗಿಸಲಾದ ವ್ಯವಸ್ಥೆಯನ್ನು ಸಂಸತ್ತಿನಲ್ಲಿ ಕಾಯ್ದೆ ರೂಪಿಸಿ, ತಪ್ಪಾಗಿ ವಿಶ್ಲೇಷಿಸಿ ಮತ್ತು ಸಂವಿಧಾನದ ಅಂಶಗಳನ್ನು ದುರ್ಬಳಕೆ ಮಾಡಿಕೊಂಡು ಬದಲಿಸುವಂತಿಲ್ಲ. ಕಾಶ್ಮೀರ ಒಂದು ರಾಜ್ಯವಾಗಿತ್ತು. ಅದರ ಸ್ಥಾನಮಾನ ಮುಂದೆಯೂ ಇರಬೇಕು. ಅಲ್ಲಿನ ಜನರ ಹಕ್ಕುಗಳನ್ನು ಮತ್ತು ಆಶಯಗಳನ್ನು ಗೌರವಿಸಬೇಕು’ ಎಂದು ಅವರು ಸರಣಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT