ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಎಲ್ಲಾ ಪಂಚಾಯಿತಿಗಳಲ್ಲೂ ಪಿಎಸಿಎಸ್‌ ಸ್ಥಾಪನೆ: ಅಮಿತ್‌ ಶಾ

Last Updated 7 ಅಕ್ಟೋಬರ್ 2022, 14:39 IST
ಅಕ್ಷರ ಗಾತ್ರ

ಗ್ಯಾಂಗ್‌ಟಕ್‌ (ಸಿಕ್ಕಿಂ): ಕ್ಷೀರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಹಾಗೂ ವಿವಿಧ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಮುಂದಿನ ಐದು ವರ್ಷಗಳಲ್ಲಿ ದೇಶದ ಎಲ್ಲಾ ಪಂಚಾಯಿತಿಗಳಲ್ಲೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಎಸಿಎಸ್‌) ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಶುಕ್ರವಾರ ಹೇಳಿದ್ದಾರೆ.

ಇಲ್ಲಿ ಹಮ್ಮಿಕೊಂಡಿದ್ದ ಪೂರ್ವ ಮತ್ತು ಈಶಾನ್ಯ ವಲಯದ ಹಾಲು ಉತ್ಪಾದಕರ ಸಹಕಾರಿ ಸಂಘದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ‘ಸದ್ಯ ದೇಶದಾದ್ಯಂತ ಕೇವಲ 65 ಸಾವಿರ ಪಿಎಸಿಎಸ್‌ಗಳು ಸಕ್ರಿಯವಾಗಿವೆ. 2027ರ ಹೊತ್ತಿಗೆ ದೇಶದ ಎಲ್ಲಾ ಪಂಚಾಯಿತಿಗಳೂ ಪಿಎಸಿಎಸ್‌ಗಳನ್ನು ಹೊಂದಲಿವೆ’ ಎಂದೂ ಭರವಸೆ ನೀಡಿದ್ದಾರೆ.

ಗ್ಯಾಸ್‌, ಪೆಟ್ರೋಲ್‌ ಮಾರಾಟ, ಹಾಲು ಮತ್ತು ಕೃಷಿ ಉತ್ಪನ್ನಗಳ ಸಂಗ್ರಹಣೆ ಹಾಗೂ ಮಾರಾಟಕ್ಕಾಗಿ ಪಿಎಸಿಎಸ್‌ಗಳು ಕಾರ್ಯನಿರ್ವಹಿಸಲಿವೆ. ಇದರಿಂದ ಮಹಿಳೆಯರ ಸಬಲೀಕರಣ ಸಾಧ್ಯ ಎಂದಿದ್ದಾರೆ.

ಹಿಂದಿನ ಸರ್ಕಾರಗಳು ಸಹಕಾರ ಕ್ಷೇತ್ರವನ್ನು ಕಡೆಗಣಿಸಿದ್ದವು ಎಂದೂ ಆರೋಪಿಸಿದ ಶಾ ಅವರು, ಬಡತನ ನಿರ್ಮೂಲನೆ ಹಾಗೂ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT